22ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
23ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.