Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 6

ಯಾಜ 6:23-28

Help us?
Click on verse(s) to share them!
23ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
24ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
25“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
27ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
28ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.

Read ಯಾಜ 6ಯಾಜ 6
Compare ಯಾಜ 6:23-28ಯಾಜ 6:23-28