Text copied!
Bibles in Kannada

ಯಾಜ 6:23-28 in Kannada

Help us?

ಯಾಜ 6:23-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
24 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
25 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26 ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
28 ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
ಯಾಜ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019