Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 6

ಯಾಜ 6:26-30

Help us?
Click on verse(s) to share them!
26ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
27ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
28ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
29ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
30ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.

Read ಯಾಜ 6ಯಾಜ 6
Compare ಯಾಜ 6:26-30ಯಾಜ 6:26-30