Text copied!
Bibles in Kannada

ಯಾಜ 6:4-12 in Kannada

Help us?

ಯಾಜ 6:4-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
5 ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
6 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
8 ಅನಂತರ ಯೆಹೋವನು ಮೋಶೆಗೆ,
9 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
10 ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
11 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12 ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
ಯಾಜ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019