Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 7

ಯಾಜ 7:15-20

Help us?
Click on verse(s) to share them!
15ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
16“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
17ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
18ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
19ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
20ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.

Read ಯಾಜ 7ಯಾಜ 7
Compare ಯಾಜ 7:15-20ಯಾಜ 7:15-20