Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 7

ಯಾಜ 7:2-28

Help us?
Click on verse(s) to share them!
2ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
3ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,
4ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
5ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
6ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.
7ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.
8ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
9ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
10ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
11“‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
12ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
13ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
14ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.
15ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
16“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
17ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
18ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
19ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
20ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.
21ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
22ಯೆಹೋವನು ಮೋಶೆಗೆ,
23“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
24ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
25ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
26ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
27ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
28ಯೆಹೋವನು ಮೋಶೆಯೊಂದಿಗೆ ಮಾತನಾಡಿ,

Read ಯಾಜ 7ಯಾಜ 7
Compare ಯಾಜ 7:2-28ಯಾಜ 7:2-28