Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 7

ಯಾಜ 7:21-28

Help us?
Click on verse(s) to share them!
21ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
22ಯೆಹೋವನು ಮೋಶೆಗೆ,
23“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
24ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
25ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
26ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
27ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
28ಯೆಹೋವನು ಮೋಶೆಯೊಂದಿಗೆ ಮಾತನಾಡಿ,

Read ಯಾಜ 7ಯಾಜ 7
Compare ಯಾಜ 7:21-28ಯಾಜ 7:21-28