Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 7

ಯಾಜ 7:23-38

Help us?
Click on verse(s) to share them!
23“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
24ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
25ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
26ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
27ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
28ಯೆಹೋವನು ಮೋಶೆಯೊಂದಿಗೆ ಮಾತನಾಡಿ,
29“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
30ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.
31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.
32ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.
33ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.
34ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.
35ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
36ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.
37ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.
38ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.

Read ಯಾಜ 7ಯಾಜ 7
Compare ಯಾಜ 7:23-38ಯಾಜ 7:23-38