Text copied!
Bibles in Kannada

ಯಾಜ 7:27-33 in Kannada

Help us?

ಯಾಜ 7:27-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
28 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
29 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
30 ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.
31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.
32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.
33 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.
ಯಾಜ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019