Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 7

ಯಾಜ 7:9-19

Help us?
Click on verse(s) to share them!
9ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
10ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
11“‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
12ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
13ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
14ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.
15ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
16“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
17ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
18ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
19ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.

Read ಯಾಜ 7ಯಾಜ 7
Compare ಯಾಜ 7:9-19ಯಾಜ 7:9-19