Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 8

ಯಾಜ 8:1-13

Help us?
Click on verse(s) to share them!
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
3ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
4ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
5ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು.
6ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.
7ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.
8ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
9ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
10ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
11ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
12ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
13ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.

Read ಯಾಜ 8ಯಾಜ 8
Compare ಯಾಜ 8:1-13ಯಾಜ 8:1-13