Text copied!
Bibles in Kannada

ಯಾಜ 8:29-35 in Kannada

Help us?

ಯಾಜ 8:29-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
30 ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
31 ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.
32 ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
35 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
ಯಾಜ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019