Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 9

ಯಾಜ 9:1-11

Help us?
Click on verse(s) to share them!
1ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.
2ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
3ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,
4ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.
5ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
6ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.
7ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.
8ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.
9ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.
10ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
11ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.

Read ಯಾಜ 9ಯಾಜ 9
Compare ಯಾಜ 9:1-11ಯಾಜ 9:1-11