Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 9

ಯಾಜ 9:15-22

Help us?
Click on verse(s) to share them!
15ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.
16ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು.
17ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
18ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
19ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,
20ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
21ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.
22ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

Read ಯಾಜ 9ಯಾಜ 9
Compare ಯಾಜ 9:15-22ಯಾಜ 9:15-22