Text copied!
Bibles in Kannada

ಯಾಜ 9:19-23 in Kannada

Help us?

ಯಾಜ 9:19-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,
20 ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
21 ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.
22 ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.
ಯಾಜ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019