Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 9

ಯಾಜ 9:20-23

Help us?
Click on verse(s) to share them!
20ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
21ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.
22ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
23ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

Read ಯಾಜ 9ಯಾಜ 9
Compare ಯಾಜ 9:20-23ಯಾಜ 9:20-23