Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 9

ಯಾಜ 9:7-15

Help us?
Click on verse(s) to share them!
7ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.
8ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.
9ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.
10ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
11ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.
12ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
13ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
14ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.
15ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.

Read ಯಾಜ 9ಯಾಜ 9
Compare ಯಾಜ 9:7-15ಯಾಜ 9:7-15