Text copied!
Bibles in Kannada

ಯೆರೆ 32:33-37 in Kannada

Help us?

ಯೆರೆ 32:33-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.
34 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
35 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
36 ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
37 ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
ಯೆರೆ 32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019