Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆರೆ

ಯೆರೆ 45

Help us?
Click on verse(s) to share them!
1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
2“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?
3ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,
4ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
5ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”