Text copied!
Bibles in Kannada

ಯೆಶಾ 10:14-16 in Kannada

Help us?

ಯೆಶಾ 10:14-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
ಯೆಶಾ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019