2ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
3ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
4ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
5ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.