Text copied!
Bibles in Kannada

ಯೆಶಾ 10:8-12 in Kannada

Help us?

ಯೆಶಾ 10:8-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
10 ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
11 ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
12 ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
ಯೆಶಾ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019