1ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
2ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
3ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
4ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
5ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.