Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 11

ಯೆಶಾ 11:9-15

Help us?
Click on verse(s) to share them!
9ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
10ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
12ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
13ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
14ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
15ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.

Read ಯೆಶಾ 11ಯೆಶಾ 11
Compare ಯೆಶಾ 11:9-15ಯೆಶಾ 11:9-15