Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 1

ಯೆಶಾ 1:1-8

Help us?
Click on verse(s) to share them!
1ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
2ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
3ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
4ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
5ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
6ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
7ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
8ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.

Read ಯೆಶಾ 1ಯೆಶಾ 1
Compare ಯೆಶಾ 1:1-8ಯೆಶಾ 1:1-8