11ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
12ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
13ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
14ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.