12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
13 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
14 ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
15 ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
16 ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
17 ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
18 “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.