16ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
17ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”