Text copied!
Bibles in Kannada

ಯೆಶಾ 1:23-26 in Kannada

Help us?

ಯೆಶಾ 1:23-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
24 ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
25 ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
26 ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
ಯೆಶಾ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019