6ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
7ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
8ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
9ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
10ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.