Text copied!
Bibles in Kannada

ಯೆಶಾ 1:7-13 in Kannada

Help us?

ಯೆಶಾ 1:7-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
10 ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
11 ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
13 ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
ಯೆಶಾ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019