Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 1

ಯೆಶಾ 1:7-22

Help us?
Click on verse(s) to share them!
7ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
8ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
9ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
10ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
11ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
12ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
13ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
14ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
15ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
16ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
17ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
18“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
20ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
21ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
22ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.

Read ಯೆಶಾ 1ಯೆಶಾ 1
Compare ಯೆಶಾ 1:7-22ಯೆಶಾ 1:7-22