Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 43

ಯೆಶಾ 43:5-11

Help us?
Click on verse(s) to share them!
5ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
6‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
7ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
8ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
9ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.
10ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
11ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

Read ಯೆಶಾ 43ಯೆಶಾ 43
Compare ಯೆಶಾ 43:5-11ಯೆಶಾ 43:5-11