Text copied!
Bibles in Kannada

ಯೆಹೋ 10:23-25 in Kannada

Help us?

ಯೆಹೋ 10:23-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು.
24 ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
25 ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.
ಯೆಹೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019