Text copied!
Bibles in Kannada

ಯೆಹೋ 10:27-36 in Kannada

Help us?

ಯೆಹೋ 10:27-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.
28 ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.
29 ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.
30 ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.
31 ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.
32 ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
33 ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.
34 ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.
35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.
36 ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ
ಯೆಹೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019