Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 10

ಯೆಹೋ 10:5-14

Help us?
Click on verse(s) to share them!
5ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.
6ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.
7ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.
8ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
9ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.
10ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
11ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
12ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.
13ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.
14ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.

Read ಯೆಹೋ 10ಯೆಹೋ 10
Compare ಯೆಹೋ 10:5-14ಯೆಹೋ 10:5-14