Text copied!
Bibles in Kannada

ಯೆಹೋ 10:7-10 in Kannada

Help us?

ಯೆಹೋ 10:7-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.
8 ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
9 ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.
10 ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
ಯೆಹೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019