Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 11

ಯೆಹೋ 11:4-13

Help us?
Click on verse(s) to share them!
4ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.
5ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
6ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
7ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
8ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
9ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
10ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
11ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.
12ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
13ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.

Read ಯೆಹೋ 11ಯೆಹೋ 11
Compare ಯೆಹೋ 11:4-13ಯೆಹೋ 11:4-13