Text copied!
Bibles in Kannada

ಯೆಹೋ 13:6-21 in Kannada

Help us?

ಯೆಹೋ 13:6-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ
7 ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.
8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
9 ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
10 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ
11 ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,
12 ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
13 ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.
14 ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.
15 ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;
17 ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,
18 ಯಹಚಾ ಕೆದೇಮೋತ್, ಮೇಫಾಯತ್,
19 ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,
20 ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ,
21 ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
ಯೆಹೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019