Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 14

ಯೆಹೋ 14:6-11

Help us?
Click on verse(s) to share them!
6ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
7ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
8ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
9ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
10ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
11ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.

Read ಯೆಹೋ 14ಯೆಹೋ 14
Compare ಯೆಹೋ 14:6-11ಯೆಹೋ 14:6-11