Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 14

ಯೆಹೋ 14:9-15

Help us?
Click on verse(s) to share them!
9ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
10ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
11ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
12ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
14ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
15ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

Read ಯೆಹೋ 14ಯೆಹೋ 14
Compare ಯೆಹೋ 14:9-15ಯೆಹೋ 14:9-15