Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 15

ಯೆಹೋ 15:3-13

Help us?
Click on verse(s) to share them!
3ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,
4ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.
5ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ
6ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,
7ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ
8ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.
9ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
10ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
11ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.
12ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
13ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

Read ಯೆಹೋ 15ಯೆಹೋ 15
Compare ಯೆಹೋ 15:3-13ಯೆಹೋ 15:3-13