Text copied!
Bibles in Kannada

ಯೆಹೋ 18:8-28 in Kannada

Help us?

ಯೆಹೋ 18:8-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.
9 ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.
10 ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.
11 ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.
12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.
13 ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
14 ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.
15 ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
16 ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.
17 ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
18 ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.
19 ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
20 ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.
21 ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
22 ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
23 ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
24 ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;
25 ಗಿಬ್ಯೋನ್, ರಾಮಾ, ಬೇರೋತ್,
26 ಮಿಚ್ಪೆ, ಕೆಫೀರಾ, ಮೋಚಾ,
27 ರೆಕೆಮ್, ಇರ್ಪೇಲ್, ತರಲಾ,
28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.
ಯೆಹೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019