Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 19

ಯೆಹೋ 19:27-41

Help us?
Click on verse(s) to share them!
27ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು
28ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.
29ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.
30ಉಮ್ಮಾ, ಅಫೇಕ್‌, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
31ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ.
32ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
33ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
34ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.
35ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,
36ಆದಾಮಾ, ರಾಮಾ, ಹಾಚೋರ್,
37ಕೆದೆಷ್ ಎದ್ರೈ, ಏನ್ ಹಾಚೋರ್,
38ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
39ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಾಗಿದೆ.
40ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:
41ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,

Read ಯೆಹೋ 19ಯೆಹೋ 19
Compare ಯೆಹೋ 19:27-41ಯೆಹೋ 19:27-41