Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 19

ಯೆಹೋ 19:6-22

Help us?
Click on verse(s) to share them!
6ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
7ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
8ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.
9ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.
10ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು
11ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.
12ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
13ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.
14ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
15ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
16ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು.
17ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:
18ಇಜ್ರೇಲ್, ಕೆಸುಲ್ಲೋತ್, ಶೂನೇಮ್,
19ಹಫಾರಯಿಮ್, ಶೀಯೋನ್, ಅನಾಹರತ್,
20ರಬ್ಬೀತ್, ಕಿಷ್ಯೋನ್, ಎಬೆಜ್,
21ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ.
22ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,

Read ಯೆಹೋ 19ಯೆಹೋ 19
Compare ಯೆಹೋ 19:6-22ಯೆಹೋ 19:6-22