Text copied!
Bibles in Kannada

ಯೆಹೋ 1:7-14 in Kannada

Help us?

ಯೆಹೋ 1:7-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
8 ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
9 ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
10 ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
11 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
12 ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
13 “ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
14 ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
ಯೆಹೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019