Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 1

ಯೆಹೋ 1:9-18

Help us?
Click on verse(s) to share them!
9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
10ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
11“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
12ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
13“ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
14ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
15ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.
16ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.
17ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
18ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.

Read ಯೆಹೋ 1ಯೆಹೋ 1
Compare ಯೆಹೋ 1:9-18ಯೆಹೋ 1:9-18