Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 21

ಯೆಹೋ 21:13-43

Help us?
Click on verse(s) to share them!
13ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,
14ಯತ್ತೀರ್, ಎಷ್ಟೆಮೋಹ,
15ಹೋಲೋನ್, ದೆಬೀರ್,
16ಅಯಿನ್, ಯುಟ್ಟಾ, ಬೇತ್‌ಷೆಮೆಷ್‌ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು
17ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,
18ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.
19ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
20ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ
21ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,
22ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
23ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,
24ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
25ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.
26ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
27ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
28ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
29ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
30ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
31ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
32ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
33ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
34ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,
35ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.
36ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,
37ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;
38ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
39ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.
40ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.
41ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.
42ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.
43ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

Read ಯೆಹೋ 21ಯೆಹೋ 21
Compare ಯೆಹೋ 21:13-43ಯೆಹೋ 21:13-43