Text copied!
Bibles in Kannada

ಯೆಹೋ 22:28-32 in Kannada

Help us?

ಯೆಹೋ 22:28-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
29 ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
30 ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
31 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.
32 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು
ಯೆಹೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019